Friday, September 18, 2026

BDA Apartments

ರಾಜ್ಯಪಾಲರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಖಂಡನೆ : ರಾಜ್ಯಾದ್ಯಂತ ಬಿಜೆ...
Home Front Page ರಾಜ್ಯಪಾಲರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಖಂಡನೆ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ರಾಜ್ಯಪಾಲರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಖಂಡನೆ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು,ಆಗಸ್ಟ್,22,2024 (www.justkannada.in):  ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ರಾಜ್ಯಪಾಲರ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ.

ರಾಜ್ಯಪಾಲರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ  ಬೆಂಗಳೂರು, ಮೈಸೂರು, ಮಂಗಳೂರಿ ಸೇರಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ನಗರದಲ್ಲಿ ಡಿಸಿ ಕಚೇರಿ ಮುಂದೆ  ಸಂಸದ ಬಿವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಧರಣಿ ನಡೆಸಿದ್ದಾರೆ.

ಮಂಗಳೂರು ಕ್ಲಾಕ್ ಟವರ್ ಬಳಿ, ಬಳ್ಳಾರಿಯ ರಾಯಲ್ ಸರ್ಕಲ್ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಹಾಗೆಯೇ  ಕಾರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ, ಕೊಡಗು ಜಿಲ್ಲೆಯಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ,  ತುಮಕೂರಿನಲ್ಲಿ ಮಾಜಿ ಸಿಎಂ ಡಿವಿಎಸ್ ವೃತ್ತದಲ್ಲಿ ಧರಣಿ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Congress, statement, Governor, BJP, protest