ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕಾಂಗ್ರೆಸ್ ಟೀಂ: ನೆರೆ ಪರಿಹಾರ ನೀಡಲು ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ.

ಬೆಳಗಾವಿ,ಜುಲೈ,27,2021(www.justkannada.in):  ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲು ಕಾಂಗ್ರೆಸ್ ತಂಡವನ್ನ ರಚಿಸಲಾಗಿದೆ. ಅವರು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.jk

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, 2019ರಲ್ಲಿ ಪ್ರವಾಹ ಬಂದಾಗ ಪರಿಹಾರ ನೀಡಲಿಲ್ಲ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ. ಸರ್ಕಾರ ಈಗ ನೆರೆ ಪೀಡಿತರಿಗೆ ಪರಿಹಾರ ನೀಡಬೇಕು. ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಈಗ ಎಲ್ಲಿಂದ ಪರಿಹಾರ ಕೊಡ್ತಾರೆ ಎಂದು ವ್ಯಂಗ್ಯವಾಡಿದರು.

ನೆರೆ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಟೀಂ ಭೇಟಿ ನೀಡಲಿದೆ. ಹೀಗಾಗಿ ನಾನು ಬೆಳಗಾವಿಗೆ ಬಂದಿದ್ದೇನೆ. ಆಗಸ್ಟ್ 1 ರಂದು ನಾನು ಕಾರವಾರಕ್ಕೆ ಭೇಟಿ ನೀಡುತ್ತೇನೆ. ಕಾಂಗ್ರೆಸ್ ಟೀಂಗಳು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಎಷ್ಟು ಪರಿಹಾರ ನೀಡಬೇಕು ಎಂದು ವರದಿ ನೀಡಲಿವೆ. ಅಧಿವೇಶನ ಕರೆದು ಚರ್ಚೆಗೆ ಆಗ್ರಹಿಸುತ್ತೇನೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: Congress team – visit- flood -affected –areas- Former CM -Siddaramaiah