ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ: ಅಖಂಡ ಶ್ರೀನಿವಾಸಮೂರ್ತಿ ಬಿಎಸ್ ಪಿ ಸೇರ್ಪಡೆ.

ಬೆಂಗಳೂರು,ಏಪ್ರಿಲ್,24,2023(www.justkannada.in): ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಬಿಎಸ್ ಪಿ ಸೇರ್ಪಡೆ.ಯಾಗಿದ್ದಾರೆ.

ಪುಲಿಕೇಶಿನಗರ ಕ್ಷೇತ್ರದಿಂದ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಕಾಂಗ್ರೆಸ್​ ಟಿಕೆಟ್​  ನೀಡಿಲ್ಲ. ಇದರಿಂದ ಅಸಮಾಧನಗೊಂಡಿರುವ  ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಎಸ್​ಪಿಯಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ  ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಕೊಡಿಸಲು ಮಾಜಿ ಸಿಎಂ ಸಿದ‍್ಧರಾಮಯ್ಯ  ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಲಾಬಿ ನಡೆಸಿದ್ದರು ಎನ್ನಲಾಗಿದೆ.

Key words: Congress -ticket –miss- Akhand Srinivasamurthy- joins- BSP.