‘ಕೈ’ ಟಿಕೆಟ್ ಮಿಸ್: ಜೆಡಿಎಸ್ ಕದ ತಟ್ಟಿದ ರಘು ಆಚಾರ್…?

ಚಿತ್ರದುರ್ಗ,ಏಪ್ರಿಲ್,7,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನಿನ್ನೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೆ ಚಿತ್ರದುರ್ಗ ಸೇರಿ ಹಲವೆಡೆ ಅಸಮಾಧಾನ ಸ್ಪೋಟವಾಗಿದ್ದು ಈ ನಡುವೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದಕ್ಕೆ ರಘು ಆಚಾರ್ ಜೆಡಿಎಸ್ ಕದ ತಟ್ಟಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದುರ್ಗದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಗೆ ನಿರಾಸೆಯಾಗಿದ್ದು ವೀರೇಂದ್ರ ಪಪ್ಪಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ ರಘು ಆಚಾರ್ ಇದೀಗ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ರಘು ಆಚಾರ್ ಏಪ್ರಿಲ್ 14 ರಂದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ. ಚಿತ್ರದುರ್ಗ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: congress-ticket –miss-Raghu achar-JDS