ಬೆಂಗಳೂರು,ಮೇ,9,2025 (www.justkannada.in): ಪಹಲ್ಗಾಮದಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ 9 ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ ಭಾರತೀಯ ಸೇನೆ ಇದೀಗ ಕಾಲ್ಕೆರುದು ಬಂದ ಪಾಕಿಸ್ತಾನದ ವಿರುದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರೆಸಿದೆ. ಈ ಮಧ್ಯೆ ಭಾರತೀಯ ಸೇನೆ ನಡೆಸುತ್ತಿರುವ ‘ಆಪರೇಷನ್ ಸಿಂಧೂರ್ ‘ ಯಶಸ್ವಿಯಾಗಲಿ ಎಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿದೆ.
ನಗರದ ಕೆ.ಆರ್.ಸರ್ಕಲ್‌ನಿಂದ ವಿಧಾನಸೌಧ ಹಾಗೂ ಹೈಕೋರ್ಟ್‌ನ ನಡುವಿನ ಮುಖ್ಯರಸ್ತೆಯ ಮಾರ್ಗವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಕ್ರೀಡಾಂಗಣದ ವೃತ್ತದವರೆಗೂ ಕಾಂಗ್ರೆಸ್ ನಾಯಕರು ತಿರಂಗ ಯಾತ್ರೆ ನಡೆಸಿ ಭಾರತೀಯ ಸೇನೆಗೆ ಶುಭಹಾರೈಸಿದರು.
ತಿರಂಗಾ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಯಾತ್ರೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಬೋಸರಾಜು, ಡಾ.ಎಂ.ಸಿ.ಸುಧಾಕರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಎಚ್.ಸಿ.ಮಹದೇವಪ್ಪ, ಹಲವು ಮಂದಿ ಶಾಸಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.
Key words: Operation Sindoora, Congress, Tiranga Yatra