Wednesday, October 7, 2026

BDA Apartments

immense respect BDA JK_Adv BDA Adv
Home Front Page ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವೀಟ್: ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವೀಟ್: ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.

ಬೆಂಗಳೂರು,ಆಗಸ್ಟ್,10,2022(www.justkannada.in): 3ನೇ ಸಿಎಂ ಸೀಟು ಹತ್ತುವ ಕಾಲ ಸನ್ನಿಹಿತ ಎಂದು ಟ್ವೀಟ್ ಮಾಡಿದ್ಧ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವಿಟ್ ಗೆ ಟಾಂಗ್ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಕಾಂಗ್ರೆಸ್ ನವರಿಗೆ ತಲೆ ಕೊಟ್ಟು ಹೋಗಿದೆ. ಸಿಎಂ ಬೊಮ್ಮಾಯಿ ಅವರ ಆಡಳಿತ ನೋಡಿ ಕಾಂಗ್ರೆಸ್ ಕಂಗೆಟ್ಟಿದೆ. ಸುಳ್ಳು ಹೇಳಿ ಇಮೇಜ್ ಜಾಸ್ತಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ನವರನ್ನ ನೋಡಿ ನಗ್ತಾರೆ ಎಂದು ವ್ಯಂಗ್ಯವಾಡಿದರು.

ಸಿಎಂ ಬೊಮ್ಮಾಯಿ ಆಡಳಿತ ನೋಡಿ ಕಾಂಗ್ರೆಸ್ ಗೆ ಹೊಟ್ಟೆ ಉರಿ. ಕಾಂಗ್ರೆಸ್ ನವರದ್ದು ಮೂರ್ಖತನದ ಟ್ವೀಟ್.  ಸಿಎಂ ಬದಲಾವಣೆ ಮಾಡುವ ಅಧಿಕಾರ ಕಾಂಗ್ರೆಸ್ ಗೆ ಇಲ್ಲ ಎಂದು ಅರಗ ಜ್ಞಾನೇಂದ್ರ ಹೇಳಿದರು.

Key words: Congress-tweet –about- CM- change- Home Minister -Araga jnanendra