ಕಾಂಗ್ರೆಸ್ಸಿಗರು ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ- ಪ್ರತಿಭಟನೆ ಕುರಿತು ಕೆಎಸ್ ಈಶ್ವರಪ್ಪ ಆಕ್ರೋಶ.

ಶಿವಮೊಗ್ಗ,ಫೆಬ್ರವರಿ,6,2024(www.justkannada.in): ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನಾಳೆ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ಸಿಗರು ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ.  ಜೈಲಿಗೆ ಹೋಗಿ ಬಂದಿರುವ ಡಿಸಿಎಂ  ಡಿ.ಕೆ ಶಿವಕುಮಾರ್ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ನಂದಿನಿ ಹಾಲಿನ ಒಕ್ಕೂಟ ಬಾಕಿ ಉಳಿಸಿಕೊಂಡಿದೆ. ತಕ್ಷಣ ರೈತರಿಗೆ ಕೊಡಬೇಕಾದ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕೇಂದ್ರದಿಂದ ಬರಬೇಕಿದ್ದ ಬಾಕಿ ಹಣಕ್ಕಾಗಿ ರಾಜ್ಯ ಸರ್ಕಾರದಿಂದ ದೆಹಲಿಗೆ ಪ್ರತಿಭಟನೆಗೆ ಹೋಗ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ವೆಚ್ಚದಲ್ಲಿ ಜಾಹಿರಾತು ನೀಡಲಾಗಿದೆ. ಮಹಾತ್ಮ ಗಾಂಧಿ ಜೊತೆ ಸಿಎಂ, ಡಿಸಿಎಂ ಫೋಟೋ ಹಾಕಿದ್ದಾರೆ. ದೆಹಲಿ ಹೋರಾಟವನ್ನ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದರೆ, ನಮ್ಮ ಅಭ್ಯಂತರವಿಲ್ಲ. ಆದರೆ, ಇವರು ಸರ್ಕಾರದ ದುಡ್ಡಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಸರ್ಕಾರದ ಹಣ ದುರುಪಯೋಗ ಮಾಡಿ, ದೆಹಲಿ ಟೂರ್‌ಗೆ ಹೊರಟಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

Key words: Congress – wasting – tax money – people – state- KS Eshwarappa