ಸ್ವಂತ ಟಿವಿ ಚಾನೆಲ್ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು, ಏಪ್ರಿಲ್ 25, 2021 (www.justkannada.in): ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ದಂದು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ.

ದೇಶದ ಜನತೆಯನ್ನು ತಲುಪುವ ಉದ್ದೇಶದಿಂದ ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ ಚಾಲನೆ ನೀಡಲಾಗಿದೆ.

ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ತಿಳಿಸಿದೆ. ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ಚಾನೆಲ್ ಆರಂಭಿಸಿರುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

ಟಿವಿ ಚಾನೆಲ್ ದೇಶದ ಜನತೆಯ ಧ್ವನಿಯಾಗುವುದರ ಜೊತೆಗೆ ಕಡುಬಡವರ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ.