Saturday, September 19, 2026

BDA Apartments

ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ- ಮಾಜಿ ಸಿಎಂ ಸಿದ್ಧ...
Home Front Page ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ-  ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ.

ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ-  ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ.

ಬೆಂಗಳೂರು,ಆಗಸ್ಟ್,15,2022(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಲ್ಲಿ ಕಾಂಗ್ರೆಸ್  ಆಯೋಜಿಸಿದ್ಧ ಸ್ವಾತಂತ್ರ ನಡಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ  ಸಿದ್ದರಾಮಯ್ಯ,  ಈ ಜಾಥಾದ ಮೂಲಕ ಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶವನ್ನು ತಮ್ಮ ಪಕ್ಷ ನೀಡಲು ಬಯಸುತ್ತದೆ ಎಂದರು.

ದೇಶ ಒಗ್ಗಟ್ಟಾಗಿರಬೇಕು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕು. ರಾಜ್ಯದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸುತ್ತಿದ್ದು,  ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಿದ್ಧರಾಮಯ್ಯ ಹೇಳಿದರು.

Key words: Congress -will come – power -next time- Former CM-Siddaramaiah