Monday, September 21, 2026

BDA Apartments

ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ: ಸಚಿವ ಕೆ.ಎಸ್.ಈಶ್ವರಪ್ಪ BDA JK_Adv BDA Adv
Home Front Page ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ: ಸಚಿವ ಕೆ.ಎಸ್.ಈಶ್ವರಪ್ಪ

ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ: ಸಚಿವ ಕೆ.ಎಸ್.ಈಶ್ವರಪ್ಪ

ಮೈಸೂರು, ಫೆಬ್ರವರಿ 08, 2022 (www.justkannada.in): ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ mystaxismall2_old mystaxismall2

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ ಎಂದಿದ್ದಾರೆ.

ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಇದೀಗ ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಟೀಕಿಸಿದ್ದಾರೆ.

ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಧಮ್ ಇದ್ದರೆ ಮುಸ್ಲೀಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ಕೊಡಿಸಿ ಎಂದು ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.