Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಐದು ರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ.

ಐದು ರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ.

ಬೆಂಗಳೂರು,ಡಿಸೆಂಬರ್,2,2023(www.justkannada.in):  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು,  ಐದು ರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮಿಜೋರಾಂನಲ್ಲಿ ಅತಂತ್ರ ಫಲಿತಾಂಶ ಬರಬಹುದು.  ನಾವು ಏನು ಊಹಿಸಿದ್ದೇವೂ ಅದರಂತೆ ಫಲಿತಾಂಶ ಬರಲಿದೆ.  ಅಯಾ ರಾಜ್ಯಗಳ ಕೈ ನಾಯಕರ ಜೊತೆ ಮಾತನಾಡಿದ್ದೇನೆ. ಎಲ್ಲ ಕಡೆಯೂ ನಮಗೆ ಬಹುಮತ ಬರುತ್ತೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೆಲ್ಲಾ ತುಂಬಾ ಆತ್ಮವಿಶ್ವಾಸದಲ್ಲಿದ್ದಾರೆ  ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Key words: Congress – win -4 out of 5 states – AICC President -Mallikarjuna Kharge – confident.