ಇಡೀ ದೇಶದಲ್ಲಿಯೇ ಕಾಂಗ್ರೆಸ್ 20 ಸ್ಥಾನ ಗೆಲ್ಲಲ್ಲ- ಮಾಜಿ ಸಚಿವ ಸಿ.ಟಿ ರವಿ ಟಾಂಗ್.

ಬಳ್ಳಾರಿ,ಫೆಬ್ರವರಿ,1,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲಲಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಸಚಿವ ಸಿ.ಟಿ ರವಿ, ರಾಜ್ಯದಲ್ಲಿ ಅಲ್ಲ, ಇಡೀ ದೇಶದಲ್ಲಿಯೇ ಕಾಂಗ್ರೆಸ್ ಇಪ್ಪತ್ತು ಸ್ಥಾನ ಗೆಲ್ಲುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಕಳೆದ ಬಾರಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈಗ ಅದು ಕೂಡ ಗೆಲ್ಲುವುದಿಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂಡಿಯಾ ಒಕ್ಕೂಟದಲ್ಲಿ ಭಿನ್ನಮತ ಕುರಿತು ಪ್ರತಿಕ್ರಿಯಿಸಿದ ಸಿ.ಟಿ ರವಿ, ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸೌಂಡ್ ಮಾಡಿತ್ತು. ಒಂದನೇ ಎರಡನೆಯ ಮೀಟಿಂಗ್ ದೊಡ್ಡ ಸೌಂಡ್ ಮಾಡಿತ್ತು. ಮೂರನೇ ಮೀಟಿಂಗ್ ಸೌಂಡ್ ನಿಂತಿದೆ ಎಂದು ವ್ಯಂಗ್ಯವಾಡಿದರು.

Key words: Congress- won’t -win -20 seats – whole country- Former minister- CT Ravi