ದೇಶ ಭಕ್ತ ಆರ್ ಎಸ್ ಎಸ್ ಸಂಘಟನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್ 05, 2022 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಸ್‌ಎಸ್ ಚಡ್ಡಿ ಸುಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಸಿಎಂ ಪ್ರತಿಕ್ರಿಯೆ ನೀಡಿದ್ದ, ಸಿದ್ದರಾಮಯ್ಯ ಆರ್ ಎಸ್‌ಎಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗೇ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.

ಆರ್ ಎಸ್‌ಎಸ್ ಕಳೆದ 75 ವರ್ಷಗಳಿಂದ ಜನರ ಸೇವೆ ಮಾಡಿಕೊಂಡು ಬರುತ್ತಿದೆ. ಜನರು ಸಂಕಷ್ಟದಲ್ಲಿದ್ದಾಗ ಆರ್ ಎಸ್‌ಎಸ್ ಸಹಾಯ ಮಾಡಿದೆ. ಆರ್ ಎಸ್ ಎಸ್ ಟೀಕಿಸುತ್ತಿರುವ ಕಾಂಗ್ರೆಸ್ ಮುಂದೆ ರಾಜ್ಯದಲ್ಲೂ ನೆಲೆ ಕಳೆದುಕೊಳ್ಳಲಿದೆ ಎಂದಿದ್ದಾರೆ.

ಪಠ್ಯ ಕೇಸರೀಕರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಕ್ಕೆ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪ್ರತಿಭಟನೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಆರ್ ಎಸ್‌ಎಸ್ ಚಡ್ಡಿ ಸುಡುವ ಅಭಿಯಾನ ಕೈಗೊಳ್ಳಲಾಗುವುದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.