Saturday, September 12, 2026

BDA Apartments

Home Front Page ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿಸಲು ನನ್ನ ವಿರುದ್ದ ಪಿತೂರಿ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿಸಲು ನನ್ನ ವಿರುದ್ದ ಪಿತೂರಿ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಬೆಳಗಾವಿ, ಮಾರ್ಚ್​, 9,2024(www.justkannada.in): ಉಡುಪಿ – ಚಿಕ್ಕಮಗಳೂರು ಲೋಕಸಭೆ  ಕ್ಷೇತ್ರದಿಂದ ಟಿಕೆಟ್ ಟಿಕೆಟ್ ತಪ್ಪಿಸಲು  ಕ್ಷೇತ್ರದಲ್ಲಿ ನನ್ನ ವಿರುದ್ದ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, , ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು ಎಂದರು.

ನನ್ನ ವಿರುದ್ದದ ಪಿತೂರಿ ಕುರಿತು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ.ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿಸಲು ನನ್ನ ವಿರುದ್ದ ಪಿತೂರಿ shobha

ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

Key words: Conspiracy – avoid -Lok Sabha election- ticket – Union Minister- Shobha Karandlaje.