Sunday, August 9, 2026

BDA Apartments

Home Front Page ಸರ್ಕಾರ ಬೀಳಿಸುವ ಷಡ್ಯಂತ್ರ ಫಲಿಸಲ್ಲ-ಬಿಜೆಪಿ ವಿರುದ್ದ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ

ಸರ್ಕಾರ ಬೀಳಿಸುವ ಷಡ್ಯಂತ್ರ ಫಲಿಸಲ್ಲ-ಬಿಜೆಪಿ ವಿರುದ್ದ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು,ಅಕ್ಟೋಬರ್,28,2023(www.justkannada.in):  ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಕುರಿತು ಬಹಳ ದೊಡ್ಡ ಷಡ್ಯಂತ್ರ ನಡೆಯುತ್ತಿದೆ.  ಆದರೆ ಯಾವುದೇ ಫಲ ಸಿಗಲ್ಲ ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ’ ಎಂದು ತಿಳಿಸಿದರು.

‘ಪಕ್ಷದ ಶಾಸಕ ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡಬಾರದು. ಪಕ್ಷದ ವಿಚಾರವಾಗಿ ಹೇಳಿಕೆ ನೀಡಿದರೆ ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

Key words: conspiracy – government-fall down- not work – DCM -DK Shivakumar -bjp