Sunday, August 2, 2026

BDA Apartments

Home Front Page ಗೂಂಡಾಗಳನ್ನ ಬಿಟ್ಟು ನನ್ನ ಹತ್ಯೆಗೆ ಸಂಚು: 6 ತಿಂಗಳಲ್ಲಿ ಉಪಚುನಾವಣೆಗೆ ಕುತಂತ್ರ-ಕೇಂದ್ರ ಸಚಿವರೊಬ್ಬರ ವಿರುದ್ಧ ಪ್ರಭು...

ಗೂಂಡಾಗಳನ್ನ ಬಿಟ್ಟು ನನ್ನ ಹತ್ಯೆಗೆ ಸಂಚು: 6 ತಿಂಗಳಲ್ಲಿ ಉಪಚುನಾವಣೆಗೆ ಕುತಂತ್ರ-ಕೇಂದ್ರ ಸಚಿವರೊಬ್ಬರ ವಿರುದ್ಧ ಪ್ರಭು ಚೌಹಾಣ್ ಆರೋಪ

ಬೀದರ್,ಆಗಸ್ಟ್,10,2023(www.justkannada.in): ಗೂಂಡಾಗಳನ್ನ ಬಿಟ್ಟು ನನ್ನ ಹತ್ಯೆಗೆ ಸಂಚು ಮಾಡಿದ್ದಾರೆ. ನನ್ನನ್ನು ಕೊಂದು 6 ತಿಂಗಳಲ್ಲಿ ಉಪಚುನಾವಣೆಗೆ ಕುತಂತ್ರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಭುಚೌಹಾಣ್,  ಭಗವಂತ ಖೂಬಾಗೆ ನನ್ನ ಮೇಲೆ ಕೋಪವಿದ್ದರೇ ಗುಂಡಿಕ್ಕಿ ಹತ್ಯೆಮಾಡಲಿ. ಆದರೆ ನಮ್ಮ ಪಕ್ಷ, ಕಾರ್ಯಕರ್ತರಿಗೆ ಖೂಬಾ ದ್ರೋಹ ಮಾಡದಿರಲಿ. ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ವಿಫಲವಾಗಿ ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು ಮಾಡುತ್ತಿದ್ದಾರೆ. ನನ್ನನ್ನು ಕೊಂದು 6 ತಿಂಗಳಲ್ಲಿ ಉಪ ಚುನಾವಣೆಗೆ ಕುತಂತ್ರ ಮಾಡ್ತಿದ್ದಾರೆ.

ರಸ್ತೆ ಮಧ್ಯೆ ಗುಂಡುಹಾರಿಸಿ ಕೊಲೆ ಮಾಡಿಸಲು ಸಂಚು ರೂಪಿಸಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Key words: Conspiracy – kill – Prabhu Chauhan -accuses -Union minister Bagavanta khuba