ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಆ,17,2020(www.justkannada.in): ಚಿಂತಾಮಣಿಯಲ್ಲಿ ಕೈಗಾರಿಕಾಭಿವೃದ್ಧಿಗೆ 1,000 ಎಕರೆ ಜಾಗ ಗುರುತಿಸಿದ್ದು, ಇದು ದೊಡ್ಡ ಕೈಗಾರಿಕಾ ವಲಯವಾಗಿ ಬೆಳೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jk-logo-justkannada-logo

ಚಿಂತಾಮಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್, ಚಿಂತಾಮಣಿಯನ್ನು ಆರ್ಥಿಕ ಮತ್ತು ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 1,000 ಎಕರೆ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿ ಮಾಡಲು ಗುರುತಿಸಲಾಗಿದೆ. ಅನೇಕ ಉದ್ಯಮ ಸಂಸ್ಥೆಗಳು ಇಲ್ಲಿ ಉದ್ಯಮ ಆರಂಭಿಸಲು ಒಪ್ಪಂದ ಮಾಡಿಕೊಂಡಿವೆ. ಈ ಪ್ರದೇಶ ಮುಂದಿನ ದಿನಗಳಲ್ಲಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಬೆಳೆಯಲಿದೆ. ಈ ಭಾಗದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ ಎಂದು ವಿವರಿಸಿದರು.

ಯುವಜನರು ವ್ಯಾಸಂಗ ಮುಗಿಸಿದ ಕೂಡಲೇ ಉದ್ಯೋಗ ಸಿಗುವಂತಾಗಬೇಕು. ಇದಕ್ಕಾಗಿ ಬೇಡಿಕೆ ಇರುವ ಕೋರ್ಸ್ ಗಳನ್ನು ಆಧರಿಸಿಯೇ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಚಿಂತಾಮಣಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಗುರಿ ಇದೆ” ಎಂದರು.

ಇದೇ ವೇಳೆ ಕೈವಾರದ ಶ್ರೀ ಯೋಗಿನಾರಾಯಣ ಕ್ಷೇತ್ರದಲ್ಲಿ ಸಚಿವ ಡಾ.ಕೆ.ಸುಧಾಕರ್ ಪೂಜೆ ಸಲ್ಲಿಸಿದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

ಕಾಮಗಾರಿಗಳಿಗೆ ಚಾಲನೆ…

ಪ್ರಧಾನಮಂತ್ರಿ ಗ್ರಾಮ ಸಡಕ್-3 ನೇ ಯೋಜನೆಯಡಿ 18 ಕೋಟಿ ರೂ. ವೆಚ್ಚದಲ್ಲಿ 30 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವ ಡಾ.ಕೆ.ಸುಧಾಕರ್ ಗುದ್ದಲಿ ಪೂಜೆ ನೆರವೇರಿಸಿದರು.Construction - Industrial Zone - 1 Thousand Acres –Chintamani-minister-Dr. K. Sudhakar

ಮೈಲಾಪುರ ಗ್ರಾಮದಿಂದ ಬೂರಗಮಾಕಲಹಳ್ಳಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೊಮ್ಮೆಕಲ್ಲುವಿನಲ್ಲಿ, ಚಿನ್ನಸಂದ್ರದಿಂದ ನಾಯಿಂದ್ರಹಳ್ಳಿವರೆಗಿನ ರಸ್ತೆ ಅಭಿವೃದ್ಧಿಗೆ ಬ್ಯಾಲಹಳ್ಳಿ ಕ್ರಾಸ್ ನಲ್ಲಿ ಮತ್ತು ಕಾಚಹಳ್ಳಿಯಿಂದ ವಿಶ್ವನಾಥಪುರವರೆಗಿನ ರಸ್ತೆ ಅಭಿವೃದ್ಧಿಗೆ ಚಿಕ್ಕಪುರದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

Summary….

1000 acres land earmarked for developing industrial area in Chintamani: Medical Education Minister Dr.K.Sudhakar

A whopping 1000 acres land has been earmarked in Chintamani to develop industrial area in the taluk, said district in-charge Minister Dr.K.Sudhakar. Speaking here after inauguration of 30 KM road constriction works at a cost of Rs.18 Crore at various villages in Chintamani taluk.

The Minister said that Chintamani is being developed as economical and Educational hub. 1000 acre industrial area will be developed here. Many industries have already agreed to establish industries here. This will be a major industrial hub in the coming days providing lakhs of employment to local youths, the Minister said. He also spoke about establishing  new educational institutions at Chintamani based on the current demand of courses.

Earlier the minister visited Shri Yoginarayana temple in Kaivara and sought blessings of Shri Tatayya. Chintamani MLA and former Dy-speaker of legislative assembly Shri Krishna Reddy, Kolar MP Shri Muniswamy and others were present during his visit.

Details of Road construction works flagged off by the Minister on Monday

  • Mylapura to Kempadenahalli road
  • Bommekallu to Buragamakalahalli road
  • Chinna Sandra to Nidagurki road
  • Hirekattigenahalli to Nayindrahalli BC Road
  • Kachahalli to Vishwanathapura road via Chikkapura.

 

Key words: Construction – Industrial Zone – 1 Thousand Acres –Chintamani-minister-Dr. K. Sudhakar