ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು, ಜುಲೈ 17, 2022 (www.justkannada.in): ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿ ಪ್ರವಾಸದಲ್ಲಿರು ಸಿಎಂ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಯಡಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದೆ. ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ 18 ಲಕ್ಷ ಮನೆಗಳ ಮಂಜೂರಾತಿ ನಿಂತುಹೋಗಿತ್ತು. ಈಗ ಅವುಗಳನ್ನು ಸರಿಪಡಿಸಿ ಅಪ್ ಲೋಡ್ ಮಾಡಲಾಗಿದೆ. ಸರ್ಕಾರದಿಂದ ಸಮಾನ ಮೊತ್ತವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಬೀದರ್, ಬೆಳಗಾವಿ, ರಾಯಚೂರು ಜಿಲ್ಲೆಗಳಿಂದ ವರದಿಗಳನ್ನು ತರಿಸಿಕೊಂಡಿದ್ದು ಕೆಲವು ಆದೇಶಗಳನ್ನು ತರಿಸಿಕೊಳ್ಳಲಾಗಿದೆ. ಕೆಲವು ಆದೇಶಗಳನ್ನು ಸಹ ನೀಡಲಾಗಿದೆ ಎಂದರು.