ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು:  ಸಾಧುಸಂತರ ಸಮ್ಮುಖದಲ್ಲಿ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ…

ಅಯೋಧ್ಯೆ,ಆ,4,2020(www.justkannada.in):  ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಅಮೃತ ಯೋಗ, ಭದ್ರ ತಿಥಿ, ಸಿದ್ಧ ಯೋಗ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು.jk-logo-justkannada-logo

500 ವರ್ಷಗಳ ನಂತರ ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿದ್ದು ಪ್ರಧಾನಿ ಮೋದಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದರು.  ಅಯೋಧ್ಯೆಯ ರಾಮಮಂದಿರ ಗರ್ಭಗುಡಿ ಸ್ಥಾನದಲ್ಲಿ ಶಿಲಾನ್ಯಾಸಕ್ಕೆ 5 ಇಟ್ಟಿಗೆಗಳನ್ನ ಬಳಕೆ ಮಾಡಲಾಗಿತ್ತು.  ನಂದಾ, ಭದ್ರಾ, ಜಯಾ, ರಿಕ್ತಾ, ಪೂರ್ಣ ಹೆಸರಿನ 5 ಇಟ್ಟಿಗೆ ಇಟ್ಟು ಪ್ರಧಾನಿ ಮೋದಿ ಪೂಜೆ ನೆರವೇರಿಸಿದರು.construction-ram-mandir-ayodhya-prime-minister-narendra-modi

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಸಾಧುಸಂತರ ಸಮ್ಮುಖದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿತು. ಬಳಿಕ ಶಿಲನ್ಯಾಸ ಸ್ಥಳಕ್ಕೆ ಪ್ರಧಾನಿ ಮೋದಿ ನಮಸ್ಕರಿಸಿದರು. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿ ಸಾಧುಸಂತರು  ಭೂಮಿಪೂಜೆಗೆ ಸಾಕ್ಷಿಯಾದರು.

ಶಿಲನ್ಯಾಸಕ್ಕೂ ಮೊದಲು ಪ್ರಧಾನಿ ಮೋದಿ ಅಯೋಧ್ಯೆಯ ಶ್ರೀ ಹನುಮಾನ್ ಗಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Key words: construction – Ram Mandir –Ayodhya-Prime Minister -Narendra Modi