ವರಿಷ್ಠರು ಸೂಚಿಸಿದರೇ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್.

ಮಂಡ್ಯ,ಏಪ್ರಿಲ್,17,2023(www.justkannada.in): ಇತ್ತೀಚೆಗಷ್ಟೇ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇದೀಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮದ‍್ಧೂರಿನಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್,  ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ  ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ. ಮದ್ದೂರಿನಲ್ಲಿ ದಿ.ಅಂಬರೀಶ್ ಅಭಿಮಾನಿಗಳು ಹೆಚ್ಚು ಇದ್ದಾರೆ. ಅಂಬರೀಶ್ ಅಭಿಮಾನಿಗಳಿರುವುದರಿಂದ ಬಿಜೆಪಿಗೆ ಪ್ಲಸ್​ ಆಗುತ್ತೆ. ಮುಂದಿನ ದಿನಗಳಲ್ಲಿ ಬಿಜೆಪಿ ಪರ ಅಭಿಷೇಕ್ ಪ್ರಚಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

Key words: contest – Mandya –constituency-  MP -Sumalatha Ambarish.