Wednesday, August 5, 2026

BDA Apartments

Home Front Page ರಾಜ್ಯದಲ್ಲಿ ಇನ್ನು ಒಂದು ವಾರಗಳ ಕಾಲ ಬಂದ್ ಮುಂದುವರಿಕೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ….

ರಾಜ್ಯದಲ್ಲಿ ಇನ್ನು ಒಂದು ವಾರಗಳ ಕಾಲ ಬಂದ್ ಮುಂದುವರಿಕೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ….

ಬೆಂಗಳೂರು,ಮಾ,18,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಇನ್ನು ಒಂದು ವಾರಗಳ ಕಾಲ ರಾಜ್ಯದಲ್ಲಿ ಬಂದ್ ಮುಂದುವರಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ರಾಜ್ಯದಲ್ಲಿ ಇನ್ನು ಒಂದು ವಾರ ಬಂದ್ ಮುಂದುವರಿಕೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ  ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಮಾಲ್ ಗಳು ಥಿಯೇಟರ್ ಶಾಲಾ ಕಾಲೇಜುಗಳು, ಮದುವೆ, ಸಭೆ ಸಮಾರಂಭಗಳು ಕ್ರೀಡಾ ಕಾರ್ಯಕ್ರಮಗಳನ್ನ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ಆದೇಶವನ್ನ ಮತ್ತೆ ಒಂದು ವಾರ ಮುಂದುವರೆಸುವುದಾಗಿ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

Key words: Continuation – Bandh -week – state-CM -BS Yeddyurappa.