ಟಿ.ನರಸೀಪುರ ತಾಲ್ಲೂಕಿನಲ್ಲಿ ಮುಂದುವರೆದ ಚಿರತೆ ಹಾವಳಿ.

ಮೈಸೂರು,ಡಿಸೆಂಬರ್,12,2022(www.justkannada.in):  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ ಎಂಬ ಮಾಹಿತಿ ವ್ಯಕ್ತವಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆ ನಡುವೆಯೂ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಈಗಾಗಲೇ  ಟಿ.ನರಸೀಪುರ ತಾಲ್ಲೂಕಿನಲ್ಲಿ  ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋಣ್  ಮೂಲಕ ಕಾರ್ಯಾಚರಣೆ ನಡೆಸಿದರೂ ವಿಫಲವಾಗಿದೆ.

Key words:  Continued- leopard -attack-T. Narasipur- taluk.