ನಿಷೇಧಾಜ್ಞೆ ಬಳಿಕ ಮೈಸೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಮುಂದುವರಿಕೆ: ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಸಾಧ್ಯವಾಗಿಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ನಿಷೇಧಾಜ್ಞೆ ತೆರವಾದ ಬಳಿಕ ಪ್ರತಿಭಟನೆ ನಡೆಸಲಾಗುವುದು. ವಲಸಿಗ ಮುಸ್ಲಿಮರನ್ನು ಹೊರಗಿಟ್ಟು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.

ಪೌರತ್ವ ಸಾಬೀತು ಪಡಿಸಲು ಸಾಧ್ಯವಾಗದ ಇತರ ಧರ್ಮಗಳ ಜನರೂ ಭಾರತದ ಪೌರತ್ವ ಕಳೆದುಕೊಳ್ಳುವ ಆತಂಕವಿದೆ. ಹಾಗಾಗಿ ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮುಂದುವರಿಸಲಿದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.