Thursday, September 3, 2026

BDA Apartments

Home Front Page ಮುಂದುವರಿದ ಭಾರಿ ಮಳೆ: ಚೆನ್ನೈನ ಹಲವು ಪ್ರದೇಶ ಜಲಾವೃತ

ಮುಂದುವರಿದ ಭಾರಿ ಮಳೆ: ಚೆನ್ನೈನ ಹಲವು ಪ್ರದೇಶ ಜಲಾವೃತ

ಚೆನ್ನೈ, ನವೆಂಬರ್ 2021 (www.justkannada.in): ಭಾರಿ ಮಳೆಯಿಂದಾಗಿ ತಮಿಳುನಾಡು ರಾಜಧಾನಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆ ಮುಂದುವರೆದಿದೆ. ಇದರಿಂದಾಗಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.