ನಿರಂತರ ಮಳೆಯಿಂದಾಗಿ ಗುಡ್ಡಕುಸಿತ: ಚಾರ್ಮಾಡಿ ಘಾಟ್  ರಸ್ತೆ ಸಂಚಾರ ಬಂದ್…

ಚಿಕ್ಕಮಗಳೂರು,ಆ,7,2019(www.justkannada.in): ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಕುಸಿದಿದ್ದು ಈ ಹಿನ್ನೆಲೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೂರ್ನಾಲ್ಕು ಕಡೆ ಗುಡ್ಡ ಕುಸಿತವಾಗಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತ ಮಾಡಲಾಗಿದೆ. ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸಂಚಾರ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ರಸ್ತೆಯಲ್ಲಿ ಬಿದ್ದಿರುವ ಮಣ್ಣನ್ನ ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಬಣಕಲ್ ಮತ್ತು ಬೆಳ್ತಂಗಡಿ ಪೊಲೀಸರು ಮೊಕ್ಕಾಂಹೂಡಿದ್ದಾರೆ.

Key words: continuous –rain-Charmedi Ghat -Road Traffic -Bandh