Wednesday, August 19, 2026

BDA Apartments

Home Front Page ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ‘ಸಂಚಿತ ವೇತನ ಪರಿಷ್ಕರಣೆ’

ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ‘ಸಂಚಿತ ವೇತನ ಪರಿಷ್ಕರಣೆ’

ಬೆಂಗಳೂರು,ಡಿಸೆಂಬರ್,21,2024 (www.justkannada.in):  ‘ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ  ಸಿಬ್ಬಂದಿ’ಗಳಿಗೆ ರಾಜ್ಯ ಸರ್ಕಾರ  ಗುಡ್ ನ್ಯೂಸ್ ನೀಡಿದ್ದು 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹೆಗಾರರ/ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ  ಆದೇಶ ಹೊರಡಿಸಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ಈ ಕೆಳಕಂಡಂತಿದೆ.

ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ / ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಆಪ್ತ ಶಾಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶದನ್ವಯ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ ನಿಯಮಗಳು, 2018ರವ್ಯಯ ಸಂಚಿತ ವೇತನವನ್ನು ನಿಗದಿಪಡಿಸಲಾಗಿರುತ್ತದೆ.

ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಕ್ರಮ ಸಂಖ್ಯೆ(2)ರ ಟಿಪ್ಪಣಿಗಳಲ್ಲಿ ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯ/ಸಹಮತಿಯನ್ವಯ ಮುಖ್ಯಮಂತ್ರಿ / ಉಪಮುಖ್ಯಮಂತ್ರಿ ಮಾನ್ಯ ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ,  ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕರ್ನಾಟಕ ನಾಗರಿಕ ಸೇವಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಅನುಸಾರ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ದಿನಾಂಕ:01.11.2024ರಿಂದ ಜಾರಿಗೆ ಬರುವಂತ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು / ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಚಿತ ವೇತನವನ್ನು ದಿನಾಂಕ:01.11.2024ರಿಂದ ಭವಿಷ್ಯಾನ್ವಯವಾಗಿ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ಈ ಕೆಳಕಂಡ ದರಗಳಲ್ಲಿ ಪರಿಷ್ಕರಿಸಿ ಆದೇಶಿಸಿದೆ. ಹಾಗೂ ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲವೆಂಬ ಷರತ್ತಿಗೊಳಪಟ್ಟು ನಿಗದಿಪಡಿಸಲಾಗಿದೆ ಎಂದು ಆದೇಶದಲ್ಲಿ  ತಿಳಿಸಿದ್ದಾರೆ.

Key words: government, contract, employees, salary revision