Friday, September 18, 2026

BDA Apartments

Home Crime ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ ಆರೋಪ: ರೈಲಿಗೆ ತಲೆ ಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ ಆರೋಪ: ರೈಲಿಗೆ ತಲೆ ಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ

ಬೀದರ್,ಡಿಸೆಂಬರ್,26,2024 (www.justkannada.in): ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಕೊಲೆ ಬೆದರಿಕೆ  ಆರೋಪ ಮಾಡಿ ಗುತ್ತಿಗೆದಾರನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬಾಲ್ಕಿ ಮೂಲದ ಸಚಿನ್(26) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಎಂಬುವವರ ವಿರುದ್ದವೇ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿರುವುದು.

ಸಚಿನ್ 7 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.  ಟೆಂಡರ್ ಕೊಡುವುದಾಗಿ ಹೇಳಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾರೆ.  ಬಳಿಕ ಮತ್ತೆ 1 ಕೋಟಿ ರೂ.  ಹಣಕ್ಕೆ ಬೇಡಿಕೆ ಇಟ್ಟು ರಾಜು ಬೆದರಿಕೆ  ಹಾಕಿದ್ದಾರೆ. ಹಣ ನೀಡದಿದ್ದರೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾರೆ.

Key words: death threats, Contractor, commits suicide