Wednesday, October 7, 2026

BDA Apartments

immense respect BDA JK_Adv BDA Adv
Home Crime  ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.

 ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.

ದಾವಣಗೆರೆ,ಮೇ,31,2024 (www.justkannada.in):  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ನಿಂದ ಕಾಮಗಾರಿಯ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆ ಮನನೊಂದು ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.

ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ.  ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್​ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು succide succid

ಹಾಗೆಯೇ ಹಣಕಾಸಿನ ವಿಚಾರದಲ್ಲಿ ಇವರ ಇಬ್ಬರು ಸಹೋದರರು  ಮೋಸಮಾಡಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಪಿಎಸ್ ಗೌಡರ್  ಆರೋಪಿಸಿದ್ದಾರೆ. ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಿಎಸ್ ಗೌಡರ್ ಪತ್ನಿ ವಸಂತಕುಮಾರ್ ದೂರು ನೀಡಿದ್ದು, ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  contractor, committed, suicide