ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್.

ಬೆಂಗಳೂರು,ಜುಲೈ,20,2022(www.justkannada.in):  ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೌದು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಟೌನ್ ಪೊಲೀಸರು  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಸಾಕ್ಷ್ಯಾಧಾರ ಕೊರೆತೆಯಿಂದಾಗಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.

ಕೋರ್ಟ್ ಗೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ಉಲ್ಲೇಖಿಸಲಾಗಿದೆ. ಇನ್ನು ಪೊಲೀಸರು ಸಲ್ಲಿಸಿರುವ ಬಿ-ರಿಪೋರ್ಟ್ ಅನ್ನು ಕೋರ್ಟ್ ಅಂಗೀಕರಿಸಿಲ್ಲ ಎನ್ನಲಾಗಿದೆ.

ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಉಡುಪಿಯ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮೊದಲು ಸಂತೋಷ್ ಸ್ನೇಹಿತರಿಗೆ ಸಂದೇಶ ಕಳಿಸಿದ್ದು,  ನನ್ನ ಸಾವಿಗೆ ಈಶ್ವಪರಪ್ಪ ಕಾರಣ ಎಂದು ಉಲ್ಲೇಖೀಸಿದ್ದರು.

Key words:  Contractor- Santosh- suicide case- Big relief – former minister- KS Eshwarappa