ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ.

ಬೆಂಗಳೂರು,ಆಗಸ್ಟ್,23,2022(www.justkannada.in): ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ಧ ಬಿ. ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಲ್ ಮಂಜೂರು ಮಾಡಲು ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ನಡೆಸಿದ ಪೊಲೀಸರು  ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು.

Key words: Contractor- Santosh-suicide- case-KS Eshwarappa