ಬೆಂಗಳೂರು, ಮಾರ್ಚ್,3,2026 (www.justkannada.in): ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಎಂ ಕ್ಷೇತ್ರದಿಂದ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದರು.
ಇಂದು ಈ ಕುರಿತು ಮಾತನಾಡಿದ ಮಂಜುನಾಥ್, ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದಿಂದ ಮಾರ್ಚ್ 6 ರಂದು ಮುಷ್ಕರಕ್ಕೆ ಕರೆ ನೀಡಲಾಗಿದೆ. ಅಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಗುತ್ತಿಗೆದಾರರು 100 ಪುಟಗಳ ಮನವಿ ನೀಡಿದರೂ ಪ್ರಯೋಜನವಿಲ್ಲ. ಮೂರು ವರ್ಷದಿಂದ ಸಿಎಂ ಸಿದ್ದರಾಮಯ್ಯ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಾವು ಕಾರಣ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಶಾಸಕರಗಳೆ ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗಿಂತ ಕಾಂಗ್ರೆಸ್ ನಲ್ಲಿ ಕಮಿಷನ್ ಹೆಚ್ಚಾಗಿದೆ. ವಿವಿಧ ಇಲಾಖೆಗಳಲ್ಲಿ ಕಮಿಷನ್ ಪ್ರಮಾಣ ಹೆಚ್ಚಾಗಿದೆ. ಸಿಎಂ ಕ್ಷೇತ್ರದಿಂದ ಪಾದಯಾತ್ರೆಗೆ ನಿರ್ಧಾರ ಮಾಡಿದ್ದೇವೆ ಎಂದು ಮಂಜುನಾಥ್ ತಿಳಿಸಿದರು.
Key words: demanding, Release, Pending bill, protest, Contractors Association







