ಬೆಂಗಳೂರು,ಫೆಬ್ರವರಿ,3,2026 (www.justkannada.in): ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್ ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.
ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಜಗನ್ನಾಥ್ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.
Key words: Contractors Association, Honorary President, Jagannath, suspended







