Sunday, August 2, 2026

BDA Apartments

Home Front Page ಡಿಸಿಎಂ ಡಿಕೆಶಿ ಸೇರಿ 7 ಸಚಿವರಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರ ಸಂಘ

ಡಿಸಿಎಂ ಡಿಕೆಶಿ ಸೇರಿ 7 ಸಚಿವರಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರ ಸಂಘ

ಬೆಂಗಳೂರು, ಜನವರಿ ,13,2025 (www.justkannada.in): ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಗುತ್ತಿಗೆದಾರರ ಸಂಘ ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸೇರಿ 7 ಸಚಿವರಿಗೆ ಪತ್ರ ಬರೆದು ಹೋರಾಟದ ಎಚ್ಚರಿಕೆ ನೀಡಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್ ಸಿ ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎನ್ ಎಸ್ ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಗುತ್ತಿಗೆದಾರರ ಸಂಘ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಈ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಪಾವತಿ ಬಾಕಿ ಇದೆ. ಈ ಬಗ್ಗೆ ಸಾಕಷ್ಟು ಬಾರಿ ಕೇಳಿದರೂ ಸ್ಪಂದನೆ ಇಲ್ಲ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಯಾವುದೇ ಸಮಸ್ಯೆಗೂ ಅವರು ಸ್ಪಂದಿಸುವುದಿಲ್ಲ. ಸಚಿವರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ಗುತ್ತಿಗೆದಾರರ ಸಂಘವು ತನ್ನ ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.

ಈ ಸರ್ಕಾರಕ್ಕೆ ಗುತ್ತಿಗೆದಾರರ ಬಗ್ಗೆ ಕರುಣೆ  ಇಲ್ಲಎಂದನಿಸುತ್ತದೆ. ಈ ರೀತಿ ನಮ್ಮನ್ನು ಕಡೆಗಣಿಸುತ್ತೀರಿ ಎಂದು ಕನಸಿನಲ್ಲೂ ಭಾವಿಸಿರಲಿಲ್ಲ. ಈ ಪತ್ರ ತಲುಪಿ ಏಳು ದಿನದೊಳಗೆ ಗುತ್ತಿಗೆದಾರರ ಸಭೆ ಕರೆದು ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಇಲ್ಲವಾದರೆ ಈ ವಿಚಾರವನ್ನು ಸಿಎಂ ಗಮನಕ್ಕೆ ತರಬೇಕಾಗುತ್ತದೆ ಎಂದು ಸಂಘವು ಎಚ್ಚರಿಕೆ ನೀಡಿದೆ.

Key words: Contractors, Association, Letter, 7 ministers