ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳುವಂತೆ ಉದಯನಿಧಿ ಸ್ಟಾಲಿನ್ ಗೆ ಪ್ರಮೋದ್ ಮುತಾಲಿಕ್ ಆಗ್ರಹ.

ಮಂಗಳೂರು,ಸೆಪ್ಟಂಬರ್,4,2023(www.justkannada.in): ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್, ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅಸಭ್ಯವಾದದ್ದು. ಸನಾತನ ಧರ್ಮ ನಾಶಪಡಿಸುತ್ತೇನೆ ಎಂಬ ಹೇಳಿಕೆಯನ್ನು ಖಂಡಿಸುತ್ತೇನೆ. ಪೆರಿಯಾರ್ ಸಂಸ್ಕೃತಿಯಿಂದ ಬಂದ ಉದಯನಿಧಿ ಆಟ ಇಲ್ಲಿ ನಡೆಯಲ್ಲ. ಉದಯನಿಧಿ ತನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಡೆಂಗ್ಯೂ ,ಮಲೇರಿಯಾದ ರೀತಿಯೇ ನಾಶ ಮಾಡ್ತೇವೆ ಎನ್ನುವುದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ತಮಿಳುನಾಡಿನಲ್ಲೂ ಉದಯನಿಧಿ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ ನಡೆಸಿದೆ. ಕರ್ನಾಟಕ ಹೈಕೋರ್ಟ್ ​ನಲ್ಲಿ ಉದಯನಿಧಿ ಸ್ಟಾಲಿನ್  ವಿರುದ್ಧ  ಪ್ರಕರಣ ದಾಖಲಿಸುತ್ತೇವೆ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದರು.

Key words: Controversial-statement -Sanatan Dharma- Pramod Muthalik –outrage-Udayanidhi Stalin.