ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ…

ಬೆಳಗಾವಿ,ಆ,27,2020(www.justkannada.in):  ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.jk-logo-justkannada-logo

ಬೆಳಗಾವಿ ಪೀರನವಾಡಿ ನಾಕಾದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ  ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಗುರುತಿಸಿದ ಜಾಗದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪಿಸಿ ಎಂದು ಆಗ್ರಹಿಸಿದರು.controversy-over-statue-sangolli-rayanna-protest-belagavi

ಸ್ಥಳೀಯ ಶಾಸಕ ಅಭಯ್ ಪಾಟೀಲ್ ವಿರುದ್ದವೂ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ವೋಟ್ ಬ್ಯಾಂಕ್ ಕಾರಣದಿಂದ ವಿವಾದದ ಬಗ್ಗೆ ಶಾಸಕರು ಮಾತನಾಡುತ್ತಿಲ್ಲ. ವಿವಾದವನ್ನ ಬಗೆಹರಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

Key words: Controversy -over – statue – Sangolli Rayanna-protest- Belagavi