ಗದ್ಧಲ ಕೋಲಾಹಲದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ.

ಬೆಳಗಾವಿ,ಡಿಸೆಂಬರ್,23,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ವಿಧೇಯಕವನ್ನ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಯಿತು.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಿತ್ತು. ಈ ವಿಧೇಯಕಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.

ಮತಾಂತರ ನಿಷೇಧ ವಿಧೇಯಕದ ಮೇಲೆ ವಿಧಾನಸಭೆ ಕಲಾಪದಲ್ಲಿ ಸಾಕಷ್ಟು ಚರ್ಚೆಯಾಯಿತು.  ಈ ಮಧ್ಯೆ ಕಾಂಗ್ರೆಸ್ ಜೆಡಿಎಸ್ ಸದಸ್ಯರು ಈ ವಿಧೇಯಕವನ್ನ ವಿರೋಧಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ನಡುವೆ ಇದೀಗ ವಿಪಕ್ಷಗಳ ಗದ್ಧಲ ಕೋಲಾಹಲದ ನಡುವೆ ಮತಾಂತರ ನಿಷೇಧ ವಿಧೇಯಕವನ್ನ ಅಂಗೀಕಾರ ಮಾಡಲಾಗಿದೆ. ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪ 10 ನಿಮಿಷ ಮುಂದೂಡಿದರು.

Key words: Conversion – Prohibition –act- Assembly-bjp-congress