ದೇಶದಲ್ಲಿ ಒಂದೇ ದಿನ 18,552 ಮಂದಿಗೆ ವಕ್ಕರಿಸಿದ ಕೊರೋನಾ…

ನವದೆಹಲಿ,ಜೂ,27,2020(www.justkannada.in): ಮಹಾಮಾರಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ.ದೇಶದಲ್ಲಿ 18,552 ಮಂದಿಯಲ್ಲಿ  ಕೊರೋನಾ ಪಾಸಿಟಿವ್  ಕಂಡು ಬಂದಿದೆ.

 ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಒಂದೇ ದಿನದಲ್ಲಿ 18,552 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5 ಲಕ್ಷ ಗಡಿದಾಟಿದೆ.  ಹಾಗೆಯೇ ಕಳೆದ 24 ಗಂಟೆಗಳಲ್ಲಿ  ಕೊರೋನಾಗೆ ದೇಶದಲ್ಲಿ 384 ಮಂದಿ ಬಲಿಯಾಗಿದ್ದಾರೆ.corona-18552-people-single-day-country

ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5,08,953 ಕ್ಕೆ ಏರಿಕೆಯಾಗಿದೆ. ಈ ಪೈಕಿ 1,97,387 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ 2,95,881 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಡೆಡ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 15,685ಕ್ಕೆ ಏರಿಕೆಯಾಗಿದೆ.

Key words: Corona – 18,552 people – single day – country.