ಕೊರೋನಾ 3ನೇ ಅಲೆ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ನವೆಂಬರ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ, ಕೋವಿಡ್ ಹೊಸ ತಳಿ ಒಮಿಕ್ರಾನ್ ಭೀತಿ ಹಿನ್ನೆಲೆ, ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ  ಸರ್ಕಾರಕ್ಕೆ ಎಚ್ಚರಿಕೆಯೊಂದನ್ನ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸರ್ಕಾರ ಕೊರೋನಾ 3ನೇ ಅಲೆ ನಿರ್ಲಕ್ಷಿಸಬಾರದು. ಎರಡನೇ ಅಲೆ ನಿರ್ಲಕ್ಷಿಸಿದ ಹಿನ್ನೆಲೆ ಅಪಾರ ಸಾವುನೋವುಗಳು ಉಂಟಾದವು.  ಕೊರೋನಾ 3ನೇ ಅಲೆ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. 3ನೇ ಅಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೇ ಸಾವುನೋವು ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಕೋವಿಡ್ 3ನೆ ಅಲೆ ತಡೆಗೆ ರಾಜ್ಯದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇತ್ತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Key words:  Corona 3rd– wave – Former CM- Siddaramaiah -warned – government.