ಕೊರೊನಾ ಆತಂಕ: ಇಂದು ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು, ನವೆಂಬರ್ 2021 (www.justkannada.in): ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ತುರ್ತು ಸಭೆ ನಡೆಸಲಿದ್ದಾರೆ.

ಹೌದು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಭೆ ನಡೆಸಲಿದ್ದಾರೆ.

ಈ ವೇಳೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಬೇಕಾ ಅಥವಾ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕಾ ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಶಾಲಾ-ಕಾಲೇಜು ಹಾಗೂ ಹಾಸ್ಟಲ್ ಗಳಲ್ಲಿ ವಿದ್ಯಾರ್ಥಿಗಳು ಒಂದೇ ಕಡೆ ಇರುತ್ತಾರೆ. ಮುಖ್ಯವಾಗಿ ಹಾಸ್ಟೆಲ್ ಗಳಲ್ಲಿ ಕನಿಷ್ಠ 200 ವಿದ್ಯಾರ್ಥಿಗಳು ಒಂದೇ ಕಡೆ ಊಟ ಮಾಡುತ್ತಾರೆ. ಇದು ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.