Sunday, August 23, 2026

BDA Apartments

Home Front Page ರಾಜ್ಯದಲ್ಲಿ ಕೊರೋನಾ ಆತಂಕ ಹಿನ್ನೆಲೆ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ.

ರಾಜ್ಯದಲ್ಲಿ ಕೊರೋನಾ ಆತಂಕ ಹಿನ್ನೆಲೆ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ.

ಬೆಂಗಳೂರು, ಡಿಸೆಂಬರ್,21,2023(www.justkannada.in):   ಕೇರಳ ಸೇರಿದಂತೆ ದೇಶದ  ಹಲವು ರಾಜ್ಯಗಳಲ್ಲಿ  ಕೊರೋನಾ ಹೆಚ್ಚುತ್ತಿದ್ದು ರಾಜ್ಯದಲ್ಲೂ ಕೋವಿಡ್ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿಇಂದು ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಭೆ ನಡೆಯಲಿದೆ.

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು,  ಮುಖ್ಯಮಂತ್ರಿ ಸಿದ್ದರಾಮಯ್ಯ  ಡಿಸಿಎಂ  ಡಿಕೆ ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಿಲಿದ್ದಾರೆ.  ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರ ಜೊತೆ  ಕೋವಿಡ್ ಕುರಿತು ಚರ್ಚೆ ನಡೆಸಲಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚಳಕ್ಕೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಇಂದಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Key words:  Corona -anxiety – Technical Advisory Committee – meeting -today.