ಮಹಾಮಾರಿ ಕೊರೋನಾಗೆ ಇಂದು ಬಳ್ಳಾರಿಯಲ್ಲಿ ಇಬ್ಬರು ಮಂಗಳೂರಿನಲ್ಲಿ ಓರ್ವ ವೃದ್ಧೆ ಬಲಿ…

ಬಳ್ಳಾರಿ,ಜೂ,24,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತಾಂಡವಾಡುತ್ತಿದ್ದು ಈ ನಡುವೆ ಇಂದು ಕೊರೋನಾದಿಂದ ಬಳ್ಳಾರಿಯಲ್ಲಿ ಇಬ್ಬರು ಮತ್ತು ಮಂಗಳೂರಿನಲ್ಲಿ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ.

 ಬಳ್ಳಾರಿಯಲ್ಲಿ ವಿಮ್ಸ್ ಆಸ್ಪತ್ರೆಯಲ್ಲಿ 28 ವರ್ಷದ ಯುವಕ ಹಾಗೂ ಕೋವಿಡ್ ಆಸ್ಪತ್ರೆಯಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.  ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 28 ವರ್ಷದ ಯುವಕನನ್ನ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಇನ್ನು 59 ವರ್ಷದ ವೃದ್ಧರೊಬ್ಬರು ಕೊರೊನಾ ವೈರಸ್ ನಿಂದ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.corona-ballari-two-mangalore-death

ಇನ್ನೊಂದೆಡೆ ಮಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಉಲ್ಲಾಳ ಮೂಲದ 66 ವರ್ಷದ ವೃದ್ಧೆ ಕೊರೋನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ವೃದ್ಧೆ ಬಿಪಿ ಶುಗರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

Key words: corona-ballari-two-mangalore-death