ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ಗೆ ಬರುತ್ತಿದೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಬೆಂಗಳೂರು,ಮೇ,11,2021(www.justkannada.in): ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ಗೆ ಬರುತ್ತಿದೆ. ಜನರು ಮಾಸ್ಕ್ ಹಾಕಿಕೊಳ್ಳಬೇಕು. ಅಂತರ ಕಾಯ್ದುಕೊಳ್ಳಬೇಕು. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.jk

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ಕೇಂದ್ರ ಸಚಿವರ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಪ್ರಧಾನಿ ಮೋದಿ ನನ್ನ ಜತೆ ಮಾತನಾಡಿದ್ದಾರೆ. ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಈಗಾಗಲೇ ಜೆಮ್​ ಶೆಡ್ ​ಪುರದಿಂದ ಆಕ್ಸಿಜನ್​ಗಳನ್ನ ಕಳುಹಿಸಿಕೊಟ್ಟಿದೆ. ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸುತ್ತಿದ್ದಾರೆ. Corona- Control – state-CM -BS Yeddyurappa.

ಕೊರೊನಾ ಎರಡನೇ ಅಲೆಯನ್ನ ನಿಯಂತ್ರಿಸಲು ಜನರ ಸಹಕಾರ ಅತ್ಯಗತ್ಯ. ಜನ ಮಾಸ್ಕ್​ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡಲ್ಲಿ ಮಾತ್ರ ಸೋಂಕನ್ನ ಕಂಟ್ರೋಲ್​  ಗೆ ಸಹಕಾರ ನೀಡಬೇಕು ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದರು.

Key words: Corona- Control – state-CM -BS Yeddyurappa.