ದೇಶದಲ್ಲಿ 14 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…

ನವದೆಹಲಿ,ಜು,27,2020(www.justkannada.in):  ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಒಂದೇ ದಿನ 48938 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 14 ಲಕ್ಷದ ಗಡಿ ದಾಟಿದೆ.jk-logo-justkannada-logo

ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.  ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ  ಏರಿಕೆಯಾಗಿದೆ.  ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ಮಹಾಮಾರಿಗೆ 708 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ.corona-crossing-14-lakh-country

ಇನ್ನು 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇನ್ನೂ 4,85,114  ಸಕ್ರಿಯ ಪ್ರಕರಣಗಳಿವೆ.

Key words: Corona crossing 14 lakh-  country