ಕೊರೋನಾ ಎಫೆಕ್ಟ್ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…..

ಬೆಂಗಳೂರು,ಮಾ,20,2020(www.justkannada.in): ಕೊರೋನಾ ವೈರಸ್ ನಿಂದ  ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಕರೋನದಿಂದ ಹದಗೆಟ್ಟ ಆರ್ಥಿಕತೆಗೆ ಕೇರಳ ಮಾದರಿ ಪ್ಯಾಕೇಜ್ ಘೋಷಿಸಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಕೇರಳದಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಲು ಅಲ್ಲಿನ ಸರ್ಕಾರ 20000ಕೋಟಿ ಘೋಷಿಸಿದೆ. ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ,  ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ? ಎಂದು ಪ್ರಶ್ನಿಸಿದ್ದಾರೆ.corona-effect-former-cm-hd-kumaraswamy-advised-state-government

ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ರಾಜ್ಯದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ. ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೆಚ್.ಡಿಕೆ ಸಲಹೆ ನೀಡಿದ್ದಾರೆ.

Key words: Corona- effect-Former CM -HD Kumaraswamy -advised – state government.