ಕೊರೊನಾ ಆತಂಕ ಮತ್ತಷ್ಟು ದೂರ: ದೇಶದಲ್ಲಿ 18,738 ಮಂದಿಗೆ ಸೋಂಕು ದೃಢ

ಬೆಂಗಳೂರು, ಆಗಸ್ಟ್ 07, 2022 (www.justkannada.in): ದೇಶದಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ದೂರವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,689ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,34,933 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಶೇ.98.50ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 4,34,84,110 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 29,58,617 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,06,21,79,411 ಡೋಸ್ ಲಸಿಕೆ ಹಾಕಲಾಗಿದೆ.  24 ಗಂಟೆಯಲ್ಲಿ 3,72,910 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.