Thursday, August 6, 2026

BDA Apartments

Home Front Page ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಒಂದೇ ದಿನದಲ್ಲಿ ಹೊಸದಾಗಿ 47,092 ಕೋವಿಡ್ ಪ್ರಕರಣ ಪತ್ತೆ.

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಒಂದೇ ದಿನದಲ್ಲಿ ಹೊಸದಾಗಿ 47,092 ಕೋವಿಡ್ ಪ್ರಕರಣ ಪತ್ತೆ.

ನವದೆಹಲಿ,ಸೆಪ್ಟಂಬರ್,2,2021(www.justkannada.in):  ದೇಶದಲ್ಲಿ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ನಡುವೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೌದು ಇದೀಗ ಮತ್ತೆ ಒಂದೇ ದಿನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 47 ಸಾವಿರ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ 47,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಯಲ್ಲಿ 509 ಮಂದಿ ಕೊರೋನಾದಿಂದ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,39,529ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 35,181 ಜನ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಇನ್ನು ದೇಶದಲ್ಲಿ ಒಟ್ಟು 3,89,583 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

Key words: Corona-hike -again – country-47,092 -new -Covid case