ಕೊರೋನಾ ಹೆಚ್ಚಳ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್…

ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆಯಲ್ಲಿ  ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ  ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.jk-logo-justkannada-logo

ಜುಲೈ 10ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಹೆಚ್.ಡಿ ಕೋಟೆ ತಾಲ್ಲೂಕಿನ ಎಲ್ಲಾ ಹೋಟೆಲ್, ರೆಸಾರ್ಟ್ ಲಾಡ್ಜ್ ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡುವಂತಿಲ್ಲ. ಹೊಸ ಪ್ರವಾಸಿಗರಿಗೆ ಬುಕಿಂಗ್ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಎಚ್ ಡಿ ಕೋಟೆ ವ್ಯಾಪ್ತಿಗೆ ಒಳಪಡುವ ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯ ಸಫಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೊರಗಿನ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Key words: Corona- increase –Nagarahole- Bandipur- Safari- Bandh