Tuesday, August 25, 2026

BDA Apartments

Home Front Page ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ.

ಬೆಂಗಳೂರು, ಜನವರಿ 17,2022(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಲೇ ಇರುವ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಸಿಎಂ ನೇತೃತ್ವದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಕಂದಾಯ ಸಚಿವ ಆರ್​. ಅಶೋಕ ಮತ್ತು ಕೋವಿಡ್​-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು  ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಕಠಿಣ ನಿಯಮಗಳನ್ನ ಜಾರಿಗೊಳಿಸಿದರೂ ಸಹ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ಹಿನ್ನಲೆಯಲ್ಲಿ ಮತ್ತಷ್ಟು ನಿರ್ಬಂಧಗಳು ಜಾರಿಗೆ ಬರುವ ಸಾಧ್ಯತೆ ಇದೆ. ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಮತ್ತು ಸಚಿವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದ್ದಾರೆ. ಎಲ್ಲಾ ಜಿಲ್ಲೆಯ ಕೊರೊನಾ ಸ್ಥಿತಿ ಬಗ್ಗೆ ಸಿಎಂ ವರದಿ ಪಡೆಯಲಿದ್ದಾರೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Corona- Increase -Today meeting -CM.