ಮೈಸೂರು,ಆ,3,2020(www.justkannada.in):  ಕೊರೋನಾ ಸೋಂಕಿತ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊರೊನಾ ಸೋಂಕಿತ 21 ವರ್ಷದ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ವಿಚಾರಣಾಧೀನ ಕೈದಿಯಾಗಿದ್ದ ಈತನನ್ನು ಶನಿವಾರ ರಾತ್ರಿಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈತ ಭಾನುವಾರ ಕಾಣೆಯಾಗಿದ್ದಾನೆ’ ಎಂದು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ದೂರು ನೀಡಿದ್ದಾರೆ.
ಈ ಕುರಿತು ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮಂಡ್ಯ ಮೂಲದ ಕೊರೊನಾ ಸೋಂಕಿತ ವ್ಯಕ್ತಿ ಕಳ್ಳತನ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದನು.
Key words: Corona- Infected- Prisoner -Escape – Kovid Hospital-mysore
 
            