ರಾಜ್ಯದ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢ !

ಬೆಂಗಳೂರು, ಮಾರ್ಚ್ 23, 2020 (www.justkannada.in): ರಾಜ್ಯದಲ್ಲಿ ಮತ್ತೋರ್ವನಲ್ಲಿ ಕೊರೋನ ವೈರಸ್ ಸೋಂಕು ದೃಢಪಟಿಟ್ಟದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರೊಂದಿಗೆ ಕೊರೋನ ಪೀಡಿತರ ಒಟ್ಟು ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈ ವೈರಸ್ ಸೋಂಕು ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್, ಪಿಪಿಇ ಕಿಟ್ 5 ಲಕ್ಷ, ಲೇಕ್-3 ಮಾಸ್ಕ್ 15 ಲಕ್ಷ ಖರೀದಿಗೆ ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.